Wednesday, November 13, 2019 10:05 AM

ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವಕ್ಕೆ ಚಾಲನೆ
115
ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವಕ್ಕೆ ಚಾಲನೆ

ಮಡಿಕೇರಿ ಸೆ.25 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 16ನೇ ವಾರ್ಷಿಕೋತ್ಸವ ಎರಡು ದಿನಗಳ ಕಾಲ ನಡೆಯಲಿದೆ.
ಇಂದು ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ಹಾಗೂ ತೀರ್ಥ ಪ್ರಸಾದ ವಿನಿಯೋಗವಾಗವಾಯಿತು.
ಸೆ.26 ರಂದು ಬೆಳಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾ ಹೋಮ, ತತ್ವ ಹೋಮ, ತತ್ವ ಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯಾಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್