Saturday, December 14, 2019 10:34 AM

ಕಾಡುಹಂದಿಗಳಿಂದ ಕೃಷಿ ನಾಶ : ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತೀವ್ರ ಅಸಮಾಧಾನ
93
ಕಾಡುಹಂದಿಗಳಿಂದ ಕೃಷಿ ನಾಶ : ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತೀವ್ರ ಅಸಮಾಧಾನ

ಮಡಿಕೇರಿ ಸೆ.25 : ಸೋಮವಾರಪೇಟೆ ತಾಲ್ಲೂಕಿನಲ್ಲಿ ಕಾಡು ಹಂದಿಗಳ ಉಪಟಳ ಮಿತಿ ಮೀರಿದೆ, ಇದನ್ನು ನಿಯಂತ್ರಿಸಲು ರೈತರೇ ಅಗತ್ಯ ಕ್ರಮ ಕೈಗೊಂಡರೆ ಅರಣ್ಯ ಅಧಿಕಾರಿಗಳು ದೂರು ದಾಖಲಿಸಿಕೊಳ್ಳುತ್ತಿದ್ದಾರೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗದ್ದೆ ಮತ್ತು ತೋಟಗಳಿಗೆ ದಾಳಿ ಇಡುತ್ತಿರುವ ಕಾಡು ಹಂದಿಗಳನ್ನು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಕೆಲವರು ಬೇಟೆಯಾಡುತ್ತಾರೆ. ಹೀಗೆ ಬೇಟೆಯಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸುತ್ತಿರುವ ಕ್ರಮ ಖಂಡನೀಯವೆಂದು ಅಪ್ಪಚ್ಚುರಂಜನ್ ಅಸಮಾಧಾನ ವ್ಯಕ್ತಪಡಿಸಿದರು.
ಕಾಡಾನೆಗಳ ದಾಳಿಯಿಂದ ಬೇಸತ್ತಿರುವ ರೈತರು ಹಾಗೂ ಬೆಳೆಗಾರರು ಇದೀಗ ಕಾಡು ಹಂದಿಗಳ ಉಪಟಳದಿಂದ ಬೇಸತ್ತಿದ್ದಾರೆ. ಅಮಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ವನ್ಯಜೀವಿಗಳು ಗದ್ದೆ, ತೋಟಗಳಿಗೆ ನುಗ್ಗದಂತೆ ಕ್ರಮ ಕೈಗೊಳ್ಳಿ ಎಂದು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ತಾ.ಪಂ ಅಧ್ಯಕ್ಷೆ ಪುಷ್ಪ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್