Monday, October 21, 2019 9:07 PM

ಕೊಡಗಿನ 3 ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ
85
ಕೊಡಗಿನ 3 ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಮಡಿಕೇರಿ ಅ.2 : ಗಾಂಧಿ ಜಯಂತಿ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಗಳಿಗೆ ಕೊಡುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಈ ಭಾರಿ ಕೊಡಗಿನ ಮೂರು ಗ್ರಾಮ ಪಂಚಾಯಿತಿಗಳು ಅರ್ಹತೆ ಪಡೆದಿವೆ. 
ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು, ಸೋಮವಾರಪೇಟೆ ತಾಲೂಕಿನ ಕೂಡುಮಂಗಳೂರು ಹಾಗೂ ವಿರಾಜಪೇಟೆ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿಗಳಿಗೆ ಪುರಸ್ಕಾರ ಲಭಿಸಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ 175 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ 2 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅನುಮೋದನೆ ಪಡೆದು ತಾಲೂಕಿಗೆ ಒಂದರಂತೆ 2018-19 ನೇ ಸಾಲಿನ ಗಾಂ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 5,925 ಗ್ರಾಮ ಪಂಚಾಯಿತಿಗಳು ಅರ್ಜಿ ಸಲ್ಲಿಸಿದ್ದವು. ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳು ಬಯಲು ಬಿಹಿರ್ದೆಸೆ ಮುಕ್ತ ಗ್ರಾಮ ಪಂಚಾಯಿತಿಗಳಾಗಿ ಘೋಷಣೆಯಾಗಿತ್ತು. 

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್