Monday, October 21, 2019 8:44 PM

ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ : ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬನ್ನಿ : ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್
61
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ : ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬನ್ನಿ : ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್

ಸಿದ್ದಾಪುರ ಅ. 5 : ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ
ಉಚಿತ ಸೈಕಲ್ ವಿತರಣೆ ಮಾಡುತ್ತಿದ್ದು. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಣದ ಮೂಲಕ ಭವಿಷ್ಯವನ್ನು ರೂಪಿಸಿಕೊಂಡ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಕರೆ ನೀಡಿದರು. .
ನೆಲ್ಯಹುದಿಕೇರಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳು ನಡೆದು ಬಂದು ಸೇರಲು ಸಾಧ್ಯವಾಗದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರಕಾರ ಉಚಿತ ಸೈಕಲ್ ವಿತರಣೆ ಮಾಡುತಿದೆ.ವಿದ್ಯಾರ್ಥಿಗಳು ಸೈಕಲ್ ಗಳನ್ನು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕೆಂದ ಅವರು
ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರು ಗಮನ ಹರಿಸಬೇಕೆಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವನಜಾಕ್ಷಿ ,ಮಂಗಳ ,ಕರ್ನಾಟಕ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಪಿ.ಸಿಅಚ್ಚಯ್ಯ ,ಶಾಲಾ ಮುಖ್ಯ ಶಿಕ್ಷಕ ಅನಿಲ್ ಕುಮಾರ್ , ಶಿಕ್ಷಕಿಯರಾದ ಭಾರತಿ, ಮಂಜುಳಾ, ರಮ್ಮಿ ,ಪ್ರವೀಣ್ ಕುಮಾರ್, ಸ್ಥಳೀಯರಾದ ಸುಕುಮಾರ್, ನಂಜಪ್ಪ ,ಮೈಮುನಾ, ಬಿಂದು ಸೇರಿದಂತೆ ಮತ್ತಿತರರು ಇದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್