Monday, October 21, 2019 8:55 PM

ಚೆಟ್ಟಳ್ಳಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ
48
ಚೆಟ್ಟಳ್ಳಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

ಮಡಿಕೇರಿ ಅ. 5 : ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯಲ್ಲಿ ಗಾಂಧೀಜಿಯವರ ೧೫೦ನೇ ಜನ್ಮದಿನೋತ್ಸವವನ್ನು  ಶ್ರಮದಾನ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಜಿ.ಸಿ ಸತ್ಯನಾರಾಯಣ ವಿದ್ಯಾರ್ಥಿಗಳು ಗಾಂಧೀಜಿಯವರ ವಿಚಾರಧಾರೆಗಳನ್ನು ಜೀವನ ಅಳವಡಿಸಿಕೊಳ್ಳಬೇಕು ಎಂದರು.ಶಾಲೆಯ  ಆಂಗ್ಲ ಭಾಷೆಯ ಶಿಕ್ಷಕಿಯಾದ  ಫಸೀಲ ಗಾಂಧೀಜಿಯವರ ಸರಳ ಜೀವನ ಶೈಲಿಯ ಬಗ್ಗೆ ವಿವರಿಸಿದರು.
ಗಾಂಧೀಜಿಯವರ ಅಚ್ಚುಮೆಚ್ಚಿನ ಗೀತೆಯಾದ “ರಘುಪತಿ ರಾಘವ ರಾಜಾ ರಾಮ್” ಗೀತೆಯನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಮೂಹಿಕವಾಗಿ ಹಾಡುವುದರ ಮೂಲಕ ಗಮನಸೆಳೆದರು.
ಭಗವದ್ಗೀತೆ, ಕುರ್ಆನ್, ಬೈಬಲ್ ಪಠಿಸುವದರ ಮೂಲ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.ಗಾಂಧೀಜಿಯವರ ಜೀವನ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಕನ್ನಡ ಶಿಕ್ಷಕಿ ಸುನಂದಾ ಸ್ವಾಗತಿಸಿ , ಶಾಲಾ ನಾಯಕ ದರ್ಶನ್ ವಂದಿಸಿದರು.ಈ ಸಂದರ್ಭ ಶಿಕ್ಷಕ ವೃಂದದವರು ಇದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್