Sunday, January 19, 2020 8:36 AM

ಬೊಕ್ಕಸ ಖಾಲಿಯಾಗಿಲ್ಲ, ಲೂಟಿಯಾಗಿದೆ
71
ಬೊಕ್ಕಸ ಖಾಲಿಯಾಗಿಲ್ಲ, ಲೂಟಿಯಾಗಿದೆ

ಬೆಂಗಳೂರು ಅ.5 : ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ, ಆದರೆ ಲೂಟಿಯಾಗಿದೆ. ಅದನ್ನು ಭರ್ತಿ ಮಾಡುವ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡುತ್ತಿದ್ದಾರೆ. ನಮ್ಮನ್ನು ಟೀಕಿಸುವ ಮೊದಲ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿದ್ದೀರಾ ಎನ್ನುವುದನ್ನು ಒಮ್ಮೆ ನೋಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೊಡಗಿನಲ್ಲಿ ಸುರಿದ ಅತಿವೃಷ್ಠಿ ಸಂತ್ರಸ್ತರಿಗೆ ಮನೆ ಕಟ್ಟಿಸಿ ಕೊಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಪ್ರತಿ ಮನೆ ನಿರ್ಮಾಣಕ್ಕೆ 97 ಸಾವಿರ ನೀಡುವುದಾಗಿ ಘೋಷಿಸಿದ್ದರು ಆದರೆ ಇನ್ನೂ ಕೊಡಗಿನಲ್ಲಿ ಯಾರಿಗೂ ಮನೆ ಕಟ್ಟಿಸಿಕೊಟ್ಟಿಲ್ಲ. ಆದರೆ ಯಡಿಯೂರಪ್ಪ ಈಗಾಗಲೇ ಮನೆ ಕಟ್ಟಲು 1 ಲಕ್ಷ ರೂ.ಆರ್ ಟಿ ಜಿಎಸ್ ಮೂಲಕ ಹಣ ಪಾವತಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರೇ ನೆರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ನೆರೆ ಪರಿಹಾರ ಕಾರ್ಯ ಸಂಬಂಧ ಸರ್ಕಾರದ ಜೊತೆ ಸಹಕರಿಸಿ ಎಂದರು.
ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ, ವಿಜಯೇಂದ್ರ ಅವರಾಗಲಿ ಹೇಳಿಲ್ಲ. ಖಜಾನೆ ಖಾಲಿಯಾಗಿದ್ದರೆ 3000 ಕೋಟಿ ರೂ. ಹಣ ಖರ್ಚು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಖಜಾನೆ ಲೂಟಿಯಾಗಿದೆ ಅದನ್ನೇ ಹೇಳಿದ್ದಾರೆ. ಅಲ್ಲದೆ ಖಜಾನೆ ಭರ್ತಿ ಮಾಡುವ ಕೆಲಸವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್