Monday, October 21, 2019 8:23 PM

‘ಗ್ರಾಹಕರಿಗೆ ಆರ್ಥಿಕ ಅರಿವು’ ಕಾರ್ಯಕ್ರಮ : ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾಸಕ ಕೆ.ಜಿ.ಬೋಪಯ್ಯ ಸಲಹೆ
50
‘ಗ್ರಾಹಕರಿಗೆ ಆರ್ಥಿಕ ಅರಿವು’ ಕಾರ್ಯಕ್ರಮ : ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾಸಕ ಕೆ.ಜಿ.ಬೋಪಯ್ಯ ಸಲಹೆ

ಮಡಿಕೇರಿ ಅ.6 :
ಆರ್ಥಿಕ ಪ್ರಗತಿಗೆ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬರು ಸ್ವಾವಲಂಬಿ ಬದುಕಿಗೆ ಆದ್ಯತೆ ನೀಡಬೇಕೆಂದು ಶಾಸಕÀ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ.
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ‘ಗ್ರಾಹಕರಿಗೆ ಆರ್ಥಿಕ ಅರಿವು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಧಾನಮಂತ್ರಿ ಅವರು ಜನ್‍ಧನ್ ಯೋಜನೆಯ ಮೂಲಕ ದೇಶದ ಪ್ರತಿಯೊಬ್ಬರು ಬ್ಯಾಂಕ್ ಖಾತೆಯನ್ನು ತೆರೆಯಲು ಅವಕಾಶ ಮಾಡಿ ಕೊಟ್ಟಿದ್ದಾರೆ. ಪ್ರತಿಯೊಬ್ಬರೂ ಉಳಿತಾಯದ ಮಾರ್ಗೋಪಾಯ ಕಂಡುಕೊಳ್ಳಬಹುದಾಗಿದೆ ಎಂದು ಶಾಸಕರು ನುಡಿದರು.
ಮುದ್ರಾ ಯೋಜನೆಯು 4 ಕೋಟಿಗಿಂತ ಹೆಚ್ಚು ಸಾಲ ಜಿಲ್ಲಾ ಕೇಂದ್ರ ಬ್ಯಾಂಕ್‍ಗೆ ನೀಡಿರುವುದು ಶ್ಲಾಘನೀಯವಾಗಿದೆ. ಬ್ಯಾಂಕ್‍ಗಳಿಂದ ಸಾಲ ಪಡೆದವರು ಮುರುಪಾವತಿಯನ್ನು ಸರಿಯಾಗಿ ಮಾಡಬೇಕು ಎಂದು ಹೇಳಿದರು.
ಕೊಡಗು ಜಿಲ್ಲೆ ಕೃಷಿ ಆಧಾರಿತವಾಗಿದ್ದು, ಕೃಷಿಗೆ ಬೇಕಾದ ಸಾಲವನ್ನು ಬ್ಯಾಂಕ್‍ಗಳು ನೀಡುತ್ತಿವೆ. ಅದರ ಸೌಲಭ್ಯ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಲೀಡ್ ಬ್ಯಾಂಕ್ ಮೂಲಕ ಎಲ್ಲರಿಗೂ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ ಗ್ರಾಹಕರು ಇದರ ಉಪಯೋಗವನ್ನು ಪಡೆಯುವಂತಾಗಬೇಕೆಂದು ಹೇಳಿದರು.

ಬ್ಯಾಂಕ್ ಅಧಿಕಾರಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸ್ವಾಭಿಮಾನಿ, ಸ್ವಾವಲಂಬನೆ ಜೀವನ ನಡೆಸಲು ಪ್ರತಿಯೊಬ್ಬರೂ ಉದ್ಯೋಗದಲ್ಲಿ ತೋಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾರ್ಯ ಅವರು ಮಾತನಾಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬ್ಯಾಂಕ್‍ಗಳು ಜಿಲಾಡಳಿತದೊಂದಿಗೆ ಸಹಕರಿಸಿವೆ ಎಂದರು.
ಬ್ಯಾಂಕ್‍ಗಳು ಜಾಗೃತಿ ಮೂಡಿಸುವಾಗ ಶಾಲಾ ಕಾಲೇಜುಗಳಿಗೂ ಹೆಚ್ಚು ಗಮನವರಿಸಬೇಕು. ಮಕ್ಕಳಿಗೆ ಬ್ಯಾಂಕ್‍ಗಳ ವ್ಯವಹಾರದ ಕುರಿತು ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ಬ್ಯಾಂಕ್‍ಗಳು ಸರ್ಕಾರದ ಯೋಜನೆ ಕುರಿತು ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸುವ ಕಾರ್ಯ ಮಾಡಬೇಕಾಗಿದೆ. ಎಲ್ಲರಿಗೂ ಸೌಲಭ್ಯ ಒದಗಿಸುವ ಕಾರ್ಯ ಮುಂದುವರೆಯಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಅವರು ಮಾತನಾಡಿ ರೈತರಿಗೆ ಬೇಕಾದ ಸಾಲ ಸೌಲಭ್ಯಗಳನ್ನು ಡಿಸಿಸಿ ಬ್ಯಾಂಕ್ ಮೂಲಕ ನೀಡಲಾಗುತ್ತದೆ. ಶಿಕ್ಷಣ, ಕೃಷಿಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಶೇ.3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 2 ಲಕ್ಷ ದಷ್ಟು ಜನ ರೈತರಿದ್ದಾರೆ, ರೈತರ ಸಾಲ ನೀಡುವ ಕಾರ್ಯ ನಡೆಯಬೇಕಾಗಿದೆ ಎಂದು ಅವರು ಹೇಳಿದರು. ಜನರು ಸಾಲ ಪಡೆಯುವ ಜೊತೆಗೆ ಸಾಲವನ್ನು ಮರು ಪಾವತಿ ಮಾಡಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಾಲಚಂದ್ರ, ವಿವಿಧ ಬ್ಯಾಂಕುಗಳ ಮುಖ್ಯಸ್ಥರಾದ ಮೀನಾಕ್ಷಿ ಸುಂದರ್, ಪಿ.ಸಿ.ಮಂಜುನಾಥ್, ದಾಮೋದರ್ ಭಟ್, ಶ್ರೀನೀವಾಸ್ ಮೂರ್ತಿ, ವಿ.ಜಿ.ಅರುಣ, ಪಾಂಡುರಂಗ, ಮತ್ತಿತ್ತರು ಹಾಜರಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್