Wednesday, November 13, 2019 10:17 AM

9 ಭಾರತೀಯ ಸೈನಿಕರ ಹತ್ಯೆ
50
9 ಭಾರತೀಯ ಸೈನಿಕರ ಹತ್ಯೆ

ನವದೆಹಲಿ ಅ.20 : ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಎರಡು ಬಂಕರ್ ಗಳನ್ನು ಉಡಾಯಿಸಲಾಗಿದ್ದು, 9 ಮಂದಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಇಂದು ಹೇಳಿಕೊಂಡಿದೆ.
ಈ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಒಬ್ಬ ಯೋಧ, ಮೂವರು ನಾಗರಿಕರು ಹತ್ಯೆಯಾಗಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರ್ ಅಸಿಫ್ ಗಾಪೂರ್ ಟ್ವೀಟ್ ಮಾಡಿದ್ದಾರೆ.
ನೌಸೇರಿ, ಜುರಾ, ಷಾಕೋಟ್ ಬಳಿ ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಭಾರತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನದಿಂದ ತಕ್ಕ ಪ್ರತ್ಯುತ್ತರ ನೀಡಲಾಗಿದೆ. 9 ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. 2 ಬಂಕರ್ ನಾಶ ಪಡಿಸಲಾಗಿದೆ. ಗುಂಡಿನ ದಾಳಿ ವೇಳೆಯಲ್ಲಿ ಪಾಕಿಸ್ತಾನದ ಒಬ್ಬ ಯೋಧ ಹಾಗೂ ಮೂವರು ನಾಗರಿಕರು ಹತ್ಯೆಯಾಗಿದ್ದು, ಇಬ್ಬರು ಸೈನಿಕರು, ಐವರು ನಾಗರಿಕರು ಗಾಯಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಇಂದು ಬೆಳಗ್ಗೆ ಪಾಕಿಸ್ತಾನ ಟಂಗ್ದಾರ್ ಸೆಕ್ಟರ್ ನಿಂದ ಉಗ್ರರನ್ನು ಭಾರತದೊಳಗೆ ನುಸುಳಿಸಲು ಶೆಲ್ ದಾಳಿ ನಡೆಸಿದೆ.ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಗುಂಡಿನ ದಾಳಿ ನಡೆಸಿದ್ದು, ನಾಲ್ಕರಿಂದ ಐದು ಪಾಕಿಸ್ತಾನದ ಸೈನಿಕರನ್ನು ಹತ್ಯೆಗೈದಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್