Tuesday, November 12, 2019 1:59 PM

ಶಾಸಕ ಜಮೀರ್‌ಗೆ ಹೃದಯಾಘಾತ
179
ಶಾಸಕ ಜಮೀರ್‌ಗೆ ಹೃದಯಾಘಾತ

ಬೆಂಗಳೂರು ಅ.20 : ಲಘು ಹೃದಯಾಘಾತವಾಗಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಇನ್ನು ಜಮೀರ್ ಅಹ್ಮದ್ ಖಾನ್ ಇತ್ತೀಚೆಗೆ ಭಾರಿ ಸುದ್ದಿಗೆ ಗ್ರಾಸವಾಗಿರುವ ಐಎಂಎ ಜ್ಯುವೆಲ್ಸ್ ವಂಚನೆ ಕೇಸ್ ನಲ್ಲೂ ಜಮೀರ್ ಅವರ ಹೆಸರು ಕೇಳಿಬಂದಿತ್ತು. ಅಲ್ಲದೆ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್