Sunday, January 19, 2020 8:03 AM

ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿ : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು : ಸೆಷನ್ ನ್ಯಾಯಾಧೀಶ ವಿ.ವಿ.ಮಲ್ಲಾಪುರ
97
ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿ : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು : ಸೆಷನ್ ನ್ಯಾಯಾಧೀಶ ವಿ.ವಿ.ಮಲ್ಲಾಪುರ

ಮಡಿಕೇರಿ ಅ.21: ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಬಲಿಯಾದ ಪೊಲೀಸ್ ಹುತಾತ್ಮರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಯಕುಮಾರ್, ಮುರಳಿಧರ, ಪೊಲೀಸ್ ನಿರೀಕ್ಷಕರಾದ ಮೇದಪ್ಪ, ಜಿಲ್ಲಾ ಶಸಸ್ತ್ರ ಪಡೆಯ ಎಸ್.ರಾಚಯ್ಯ, ಉಪ ಪೊಲೀಸ್ ನಿರೀಕ್ಷಕರಾದ ನಂದೀಶ್ ಕುಮಾರ್, ಮಹಿಳಾ ಪೊಲೀಸ್ ನಿರೀಕ್ಷಕರಾದ ಅಚ್ಚಮ್ಮ, ಎಎಸ್‍ಐ ರಮೇಶ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸವಿತಾ ರೈ, ಪೊಲೀಸ್ ವಾದ್ಯ ವೃಂದದ ಸಿದ್ದೇಶ್, ಪಿ.ಆರ್.ರಾಜು, ಏರ್ ಕಮಾಂಡರ್(ನಿವೃತ್ತ) ಸಿದ್ದಯ್ಯ, ಬಂಧಿಖಾನೆ ವಿಭಾಗದಿಂದ ಕೃಷ್ಣಮೂರ್ತಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಜಿಲ್ಲಾ ಅಧಿಕಾರಿ ಪಿ. ಚಂದನ್, ರೋಟರಿ ಸಂಸ್ಥೆಯ ಮಂದಣ್ಣ, ವಕೀಲರ ಸಂಘದ ಅಧ್ಯಕ್ಷರಾದ ಕವನ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ, ಕಾಳಪ್ಪ, ಸೂರ್ತಲೆ ಸೋಮಣ್ಣ ಇತರರು ಪೊಲೀಸ್ ಹುತಾತ್ಮರ ಪ್ರತಿಮೆಗೆ ಹೂಗುಚ್ಚ ಅರ್ಪಿಸಿ ಗೌರವ ನಮನ ಸಮರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ ಅವರು ಪೊಲೀಸರ ಭವಣೆ, ಶ್ರಮವನ್ನು ಕಣ್ಣಾರೆ ನೋಡಿದ್ದೇನೆ. ಹೃದಯದಿಂದ ಅನುಭವಿಸಿದ್ದೇನೆ. ನಮ್ಮ ತಂದೆಯವರು ಸಹ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.
ಯೋಧರು ಗಡಿ ಕಾಯುತ್ತಾರೆ. ಹಾಗೆಯೇ ಪೊಲೀಸರು ಆಂತರಿಕವಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹಲವು ಒತ್ತಡಗಳ ನಡುವೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ ಮಾಡುತ್ತಾರೆ. ಕೆಲವು ಸಂದರ್ಭದಲ್ಲಿ ಪೊಲೀಸರು ವಾರಗಟ್ಟಲೆ ಮನೆಗೆ ಬಾರದೆ ಕಾನೂನು ಸುವ್ಯವಸ್ಥೆ ಕಾಪಾಡುವುಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಅವರು ಹೇಳಿದರು.
ಸಮಾಜದಲ್ಲಿ ಶಾಂತಿಗಾಗಿ ಪೊಲೀಸರು ದಿನದ 24 ಗಂಟೆಯೂ ಜಾಗೃತರಾಗಿ ಕೆಲಸ ನಿರ್ವಹಿಸುತ್ತಾರೆ. ಪೊಲೀಸರ ಸಮಯ ಪ್ರಜ್ಞೆಯಿಂದ ದೇಶದಲ್ಲಿ ನಾಗರಿಕರ ರಕ್ಷಣೆ ಮತ್ತು ಶಾಂತಿ ನೆಲೆಸುವಲ್ಲಿ ಪೊಲೀಸರ ಪಾತ್ರ ಮಹತ್ತರ ಎಂದು ಅವರು ಹೇಳಿದರು.
ಕಳೆದ ವರ್ಷ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳ ವಿವರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಓದಿದರು.
ಪೊಲೀಸರ ಶೌರ್ಯ ಸಾಹಸವನ್ನು ಸ್ಮರಿಸುವ ದಿನವಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದೇಶ ಹಾಗೂ ಸಮಾಜದ ರಕ್ಷಣೆ ಸಂದರ್ಭದಲ್ಲಿ ದೇಶದಲ್ಲಿ 292 ಮಂದಿ ಮತ್ತು ರಾಜ್ಯದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಶಸಸ್ತ್ರ ಪಡೆಯ ಎಸ್.ರಾಚಯ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಅರ್ಪಿಸಲಾಯಿತು. ಪೊಲೀಸ್ ಮುಖ್ಯ ಪೇದೆ ಸಿದ್ದೇಶ್ ಅವರ ನೇತೃತ್ವದ ಪೊಲೀಸ್ ವಾದ್ಯ ತಂಡದವರು ರಾಷ್ಟ್ರಗೀತೆ ಹಾಡಿದರು. ಅಂತೋಣಿ ಡಿಸೋಜ ನಿರೂಪಿಸಿ, ವಂದಿಸಿದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್