Tuesday, November 12, 2019 2:05 PM

ಟಿ.ಪಿ.ರಮೇಶ್‍ಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ
52
ಟಿ.ಪಿ.ರಮೇಶ್‍ಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಡಿಕೇರಿ ನ.8 :
ಕೇರಳದ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ವತಿಯಿಂದ ನೀಡಲಾಗುವ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಭಾಜನರಾಗಿದ್ದಾರೆ.
ಕನ್ನಡ ಸಾಹಿತ್ಯ, ಸಂಸ್ಕøತಿ, ಜಾನಪದ, ಸಮಾಜ ಸೇವೆ, ಮುಂತಾದ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ನ.23 ರಂದು ಕಾಸರಗೋಡಿನ ಕ್ಯಾಪಿಟಲ್‍ಇನ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಡಗುವುದು.
ಕಾರ್ಯಕ್ರಮದಲ್ಲಿ ಕೇರಳದ ಹಾಗೂ ಕರ್ನಾಟಕದ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್