Saturday, December 14, 2019 11:13 AM

ಬಗೆಹರಿಯದ ಶಿವಸೇನಾ ಮೈತ್ರಿ ಗೊಂದಲ
45
ಬಗೆಹರಿಯದ ಶಿವಸೇನಾ ಮೈತ್ರಿ ಗೊಂದಲ

ಜೈಪುರ ನ.11 : ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯ ಬಿಕ್ಕಟ್ಟು ಮುಂದುವರೆದಿದ್ದು, ಎನ್ ಡಿಎ ಮೈತ್ರಿ ಕಡಿದುಕೊಳ್ಳಲು ಮುಂದಾಗಿರುವ ಶಿವಸೇನಾಗೆ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರಲ್ಲೇ ಪರ, ವಿರೋಧ ವ್ಯಕ್ತವಾಗುತ್ತಿದೆ.
ಬಿಜೆಪಿಯ ಕುದುರೆ ವ್ಯಾಪಾರದ ಭಯದಿಂದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ನಾಯಕರು ಜೈಪುರದ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು ವಿಶೇಷ ವಿಮಾನದ ಮೂಲಕ ಕೆಲವು ಹಿರಿಯ ನಾಯಕರು ದೆಹಲಿಗೆ ತೆರಳಿದ್ದಾರೆ.
ಶಿವಸೇನಾಗೆ ಬೆಂಬಲ ನೀಡುವ ಈ ಕುರಿತು ಚರ್ಚಿಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳ ಸಾಹೇಬ್ ತೊರಟ್ ಹಾಗೂ ಇತರೆ ಮೂವರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್, ಸುಶಿಲ್ ಸಿಂಧೆ ಮತ್ತು ಪೃಥ್ವಿರಾಜ್ ಚವಾಣ್ ಅವರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನಾಗೆ ಬೆಂಬಲ ನೀಡುವ ಕುರಿತು ಕಾಂಗ್ರೆಸ್ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೆ ಕೆಲವು ಶಿವಸೇನಾಗೆ ಬಂಬಲ ನೀಡಲು ಒಪ್ಪಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇದುವರೆಗೂ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಇಂದು ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್