Tuesday, February 18, 2020 9:02 PM

ರಾಘವೇಂದ್ರ ರಾಜ್ ಕುಮಾರ್ ಉತ್ತಮ ನಟ
69
ರಾಘವೇಂದ್ರ ರಾಜ್ ಕುಮಾರ್ ಉತ್ತಮ ನಟ

ಬೆಂಗಳೂರು ಜ.10 : 2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಮತ್ತು ಮೇಘನಾ ರಾಜ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಒಲಿದು ಬಂದಿದೆ.
‘ಅಮ್ಮನೆ ಮನೆ’ ಸಿನಿಮಾದ ನಟನೆಗಾಗಿ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಒಲಿದು ಬಂದಿದ್ದು, ಇರುವುದೆಲ್ಲವ ಬಿಟ್ಟು ಚಿತ್ರದ ಅಮೋಘ ನಟನೆಗಾಗಿ ಮೇಘನಾ ರಾಜ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಉಳಿದಂತೆ ದಯಾಳ್ ಪದ್ಮನಾಭನ್ ನಿರ್ದೇಶನ ‘ಆ ಕರಾಳ ರಾತ್ರಿ’ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದ್ದು, ಜೀವಮಾನ ಸಾಧನೆಗಾಗಿ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರಿಗೆ ಡಾ ರಾಜ್ ಕುಮಾರ್ ಪ್ರಶಸ್ತಿ, ಪಿ. ಶೇಷಾದ್ರಿ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಬಿ ಎಸ್ ಬಸವರಾಜು ಅವರಿಗೆ ವಿಷ್ಣುವರ್ಧನ ಪ್ರಶಸ್ತಿ ಘೋಷಣೆಯಾಗಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್