Tuesday, February 18, 2020 9:18 PM

ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ
89
ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ

ಮಡಿಕೇರಿ ಜ. 16 : ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಹತ್ತಕ್ಕು ಹೆಚ್ಚು ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ನಟಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ.

ಶೂಟಿಂಗ್ ಗಾಗಿ ಹೊರ ಹೋಗಿರುವ ಕಾರಣ ಸದ್ಯ ರಶ್ಮಿಕಾ ಮನೆಯಲ್ಲಿಲ್ಲ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮನೆ ಮಾತಾಗಿರುವ ರಶ್ಮಿಕಾ ಮಂದಣ್ಣ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್