Tuesday, February 18, 2020 8:55 PM

ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆ
98
ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆ

ಮಡಿಕೇರಿ ಜ.18 : ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಐದು ಮಂದಿ ಸದಸ್ಯರ ಸಮಿತಿ ಇದಾಗಿದ್ದು, ಆರಗ ಜ್ಞಾನೇಂದ್ರ, ಎಸ್‍ಆರ್ ವಿಶ್ವನಾಥ್, ಎ.ಟಿ.ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ್, ರಾಜೂಗೌಡ ಸಮಿತಿಯಲ್ಲಿ ಇರಲಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ನೇಮಕವಾಗಿರುವ ಎಸ್‍ಐಟಿ ಅವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆಗೂ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. “ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇವಿಎಂಗಳನ್ನು ಸಂಗ್ರಹಿಸಿಡಲು ಗೋದಾಮುಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇವಿಎಂ ಸಂರಕ್ಷಣೆ ಮಾಡಲಾಗುತ್ತದೆ. ಇವಿಎಂ ಗೋದಾಮುಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ವೆಚ್ಚವಾಗಲಿದೆ,” ಎಂದು ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್