Monday, April 6, 2020 7:38 AM

ಅತ್ಯಾಚಾರಿಗಳಿಗೆ ಮಾ.3 ರಂದು ಗಲ್ಲು
63
ಅತ್ಯಾಚಾರಿಗಳಿಗೆ ಮಾ.3 ರಂದು ಗಲ್ಲು

ನವದೆಹಲಿ ಫೆ.17 : ಎರಡೆರಡು ಬಾರಿ ಡೆತ್ ವಾರೆಂಟ್ ನಿಂದ ತಪ್ಪಿಸಿಕೊಂಡಿದ್ದ ನಿರ್ಭಯಾ ಅತ್ಯಾಚಾರಿಗಳ ವಿರುದ್ಧ ಇದೀಗ ಮತ್ತೆ ಡೆತ್ ವಾರೆಂಟ್ ಜಾರಿಯಾಗಿದ್ದು ಮಾರ್ಚ್ 3ರಂದು ಗಲ್ಲಿಗೆ ದಿನಾಂಕ ನಿಗಧಿಯಾಗಿದೆ.
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಇಡೀ ದೇಶವೇ ಎದುರು ನೋಡುತ್ತಿದೆ. ಆದರೆ ಅಪರಾಧಿಗಳ ಕಾನೂನು ಹೋರಾಟದ ನಾಟಕಗಳ ನಂತರ ಇದೀಗ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ದಿನಾಂಕ ನಿಗದಿಯಾಗಿದ್ದು ಮಾರ್ಚ್ 3ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ಆರೋಪಿಗಳನ್ನೂ ನೇಣಿಗೇರಿಸಲು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ.
ನಾಲ್ವರು ಅತ್ಯಾಚಾರಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗುತ್ತದೆ. ಅಪರಾಧಿಗಳಿಗೆ ನೇಣು ಕುಣಿಕೆ ಬಿಗಿಯುವ ಮುನ್ನ ಗಲ್ಲಿಗೇರಿಸುವ ಡಮ್ಮಿ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ತಿಹಾರ್ ಜೈಲಿನಲ್ಲಿ ಒಂದು ಬಾರಿ ಡಮ್ಮಿ ಪ್ರಕ್ರಿಯೆ ನಡೆಸಲಾಗಿತ್ತು.
ನಿರ್ಭಯಾ ಅತ್ಯಾಚಾರಿಗಳಾದ ಮುಖೇಶ್, ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ಸಿಂಗ್ ವಿರುದ್ಧ ಡೆತ್ ವಾರೆಂಟ್ ಜಾರಿಗೊಳಿಸಲಾಗಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್