Monday, April 6, 2020 6:25 AM

ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ : ಫೆ.21 ರಂದು ಸಿಎನ್‍ಸಿ ಧರಣಿ
144
ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ : ಫೆ.21 ರಂದು ಸಿಎನ್‍ಸಿ ಧರಣಿ

ಮಡಿಕೇರಿ ಫೆ.18 : ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆಯ ದಿನವಾದ ಫೆ.21 ರಂದು ಬೆಳಗ್ಗೆ 10.30 ಗಂಟೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಈ ಸಂದರ್ಭ ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರಿಸಬೇಕು ಮತ್ತು ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು ಹಾಗೂ ಪ್ರತೀ ವರ್ಷ ಆಕ್ಸ್‍ಫರ್ಡ್ ಶಬ್ದ ಕೋಶದಲ್ಲಿ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಆಕ್ಸ್‍ಫರ್ಡ್ ಶಬ್ದಕೋಶದಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವುದರ ಮೂಲಕ ಕೊಡವ ತಕ್ಕ್ ಮತ್ತು ‘ಆಕ್ಸ್‍ಫರ್ಡ್ ಡಿಕ್ಷ್ನರಿ’ ಎರಡೂ ಸಮೃದ್ಧ ಮತ್ತು ಶ್ರೀಮಂತಗೊಳ್ಳಬೇಕೆಂಬ ಬೇಡಿಕೆಯೊಂದಿಗೆ ಒಟ್ಟು 18 ಹಕ್ಕೊತ್ತಾಯಗಳನ್ನು ಮಂಡಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಜಾಗತಿಕ ನಳಂದ ವಿಶ್ವವಿದ್ಯಾನಿಲಯ, ಇಂದಿರಾಗಾಂಧಿ ಬುಡಕಟ್ಟು ವಿಶ್ವವಿದ್ಯಾನಿಲಯ, ತಿರುವನಂತಪುರಂ ನಲ್ಲಿರುವ ಇಂಟರ್ ನ್ಯಾಷನಲ್ ಸ್ಕೂಲ್‍ಆಫ್ ದ್ರಾವಿಡಿಯನ್ ಲಿಂಗ್ವಿಸ್ಟಿಕ್ಸ್ ಮತ್ತು ಆಂಧ್ರದ ದ್ರಾವಿಡ ವಿಶ್ವವಿದ್ಯಾನಿಲಯದಲ್ಲಿ ಕೊಡವ ಶಾಸ್ತ್ರ ಮತ್ತು ಕೊಡವ ತಕ್ಕ್‍ನ ಅಧ್ಯಾಯನ ಪೀಠಗಳನ್ನು ಸ್ಥಾಪಿಸುವಂತೆಯೂ ಹಕ್ಕೊತ್ತಾಯ ಮಂಡಿಸಲಾಗುತ್ತದೆಂದು ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಸಿ.ಎನ್.ಸಿ. ಆಶ್ರಯದಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಕೊಡಗಿನ ವಿವಿಧೆÉಡೆಗಳಿಂದ ಸಿಎನ್‍ಸಿ ಕಾರ್ಯಕರ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಸತ್ಯಾಗ್ರಹ ನಡೆಯಲಿದೆ. ಸತ್ಯಾಗ್ರಹದ ನಂತರ ಪ್ರಧಾನ ಮಂತ್ರಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಕೇಂದ್ರ ಗೃಹ ಮಂತ್ರಿ, ಮುಖ್ಯ ಮಂತ್ರಿ ಮತ್ತು ವಿಶ್ವಸಂಸ್ಥೆ ಮುಖ್ಯಸ್ಥರು ಮತ್ತು ಯುನೆಸ್ಕೊ ಮುಖ್ಯಸ್ಥರುಗಳಿಗೆ ಜಿಲ್ಲಾಡಳಿತದ ಮೂಲಕ ಜ್ಞಾಪನಾ ಪತ್ರ ಸಲ್ಲಿಸಲಾಗುವುದೆಂದು ನಾಚಪ್ಪ ತಿಳಿಸಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್