ಟೈಲರ್ಸ್ ಅಸೋಸಿಯೇಷನ್ ನಿಂದ ನೆರವಿಗಾಗಿ ಮನವಿ
01/05/2020

ಮಡಿಕೇರಿ ಮೇ 1 : ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಮಂದಿಗೆ ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟ ಎದುರಾಗಿದ್ದು, ಸರ್ಕಾರ ಸೂಕ್ತ ಸಹಕಾರ ನೀಡಬೇಕೆಂದು ಒತ್ತಾಯಿಸಿ ಟೈಲರ್ಸ್ ಅಸೋಸಿಯೇಷನ್‍ನ ಸೋಮವಾರಪೇಟೆ ಕ್ಷೇತ್ರ ಸಮಿತಿ ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಕಳೆದ ಒಂದು ತಿಂಗಳಿನಿಂದ ವೃತ್ತಿ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಊಟಕ್ಕೂ ಕಷ್ಟವಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಶಾಲಾ ಶುಲ್ಕ ಪಾವತಿಸಲು ಕೂಡ ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಅಮಿತಿಯ ಅಧ್ಯಕ್ಷ ಹೆಚ್.ಬಿ.ಲಿಂಗಪ್ಪ ಅಳಲು ತೋಡಿಕೊಂಡಿದ್ದಾರೆ.