ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಗಣೇಶ್ ನೇಮಕ

01/05/2020

ಮಡಿಕೇರಿ ಮೇ 1 : ಕೊಡಗು ಜಿಲ್ಲೆಯ ನೂತನ ತಾಲ್ಲೂಕು ಕೇಂದ್ರ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಗಣೇಶ್ ನೇಮಕಗೊಂಡಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ಠಾಣಾಧಿಕಾರಿಯಾಗಿದ್ದ ವೆಂಕಟರಮಣ ಅವರನ್ನು ಮಡಿಕೇರಿ ನಗರ ಠಾಣೆಗೆ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಕೊರೋನಾ ಪರಿಸ್ಥಿತಿಯನ್ನು ಎದುರಿಸಲು ಸಾರ್ವಜನಿಕರ ಸಹಕಾರ ಅಗತ್ಯವೆಂದು ಗಣೇಶ್ ಮನವಿ ಮಾಡಿದ್ದಾರೆ.