ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ವಿಕಲಚೇತನರಿಗೆ ದಿನಸಿ ಸಾಮಾಗ್ರಿ ವಿತರಣೆ

01/05/2020

ಮಡಿಕೇರಿ ಮೇ 1 : ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಈ ಲಾಕ್ ಡೌನ್ ಸಮಯದಲ್ಲಿ ವಿಕಲಚೇತನ ಕಾರ್ಯಕ್ರಮದಡಿಯಲ್ಲಿ ಸುಮಾರು ಎಪ್ಪತ್ತೊಂದು ವಿಕಲಚೇತನರಿಗೆ ದಿನಸಿ ಸಾಮಾಗ್ರಿ ವಿತರಿಸಲಾಗಿದೆ.
ಮೂರು ತಾಲೂಕುಗಳಲ್ಲಿ ಅವರವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪಡಿತರ ವಸ್ತುಗಳನ್ನು ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಕಳೆದ ಎರಡು ವಾರಗಳಿಂದ ಯೂತ್ ಮೂವ್ ಮೆಂಟ್ ಕಾರ್ಯಕರ್ತರು ಸ್ವಯಂ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.