ಮೇ 5 ರಂದು ಕೃಷಿ ಸಚಿವರು ಕೊಡಗು ಜಿಲ್ಲೆಗೆ ಭೇಟಿ
02/05/2020

ಮಡಿಕೇರಿ ಮೇ.2 : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮೇ 5 ರಂದು ಕೊಡಗು ಜಿಲ್ಲೆ ಭೇಟಿ ನೀಡಲಿದ್ದಾರೆ.
ಸಂಜೆ 4.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾಧಿಕಾರಿಯವರು, ಕೃಷಿ ಇಲಾಖೆ, ತೋಟಗಾರಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಲಭ್ಯತೆ ಮತ್ತು ಕೃಷಿ ಉತ್ಪನ್ನಗಳ ಸರಕು ಸಾಗಣಿಕೆ ಬಗ್ಗೆ ನಗರದ ಜಿಲ್ಲಾ ಪಂಚಾಯತ್ ನೂತನ ಭವನದಲ್ಲಿ ಸಭೆ ನಡೆಸಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿಗಳಾದ ಸಿ.ಎಲ್.ಶಿವಕುಮಾರ್ ಅವರು ತಿಳಿಸಿದ್ದಾರೆ.