ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ವೀಡಿಯೋ ಸಂವಾದ

02/05/2020

ಮಡಿಕೇರಿ ಮೇ 2 : ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಮುಂದೆ ಜಿಲ್ಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹಲವು ಮಾಹಿತಿ ನೀಡಿದರು.
ವೀಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳು, ನಾನಾ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಡಿವೈಎಸ್‍ಪಿ, ತಾಲೂಕು ಪಂಚಾಯಿತಿ ಇಒ ಇತರರು ಪಾಲ್ಗೊಂಡಿದ್ದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಲಾಕ್‍ಡೌನ್ ಸಂಬಂಧ ಸರ್ಕಾರದ ನಿರ್ದೇಶನ ಪಾಲಿಸಬೇಕಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುವವರ ಸ್ಕ್ರೀನಿಂಗ್ ಮಾಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಅವರು ಪಾಸ್ ಅಗತ್ಯ ಇರುವವರಿಗೆ ಡಿವೈಎಸ್‍ಪಿಗಳು ವಿತರಿಸಲಿದ್ದಾರೆ ಎಂದು ಅವರು ಹೇಳಿದರು.
ಸೋಮವಾರ ಪೇಟೆ ತಹಶೀಲ್ದಾರ್ ಗೋವಿಂದ ರಾಜು, ತಾ.ಪಂ ಇ.ಒ ಸುನೀಲ್ ಕುಮಾರ್, ವೀರಾಜಪೇಟೆ ತಹಶೀಲ್ದಾರ್ ನಂದೀಶ್, ಡಿವೈಎಸ್‍ಪಿ ಜಯ ಕುಮಾರ್ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ನೋಡಲ್ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.