ಹಂದ್ವಾರದಲ್ಲಿ ಗುಂಡಿನ ಚಕಮಕಿ : ಐವರು ಯೋಧರು ಹುತಾತ್ಮ

03/05/2020

ನವದೆಹಲಿ ಮೇ 3 : ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಲ್ ಮತ್ತು ಮೇಜರ್ ವೊಬ್ಬರು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಇಬ್ಬರು ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರದ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ.
ಉಗ್ರರ ಬಳಿ ಒತ್ತೆಯಾಳುಗಳಾಗಿದ್ದ ನಾಗರೀಕರನ್ನು ಭದ್ರತಾ ಪಡೆಗಳು ಸುರಕ್ಷಿತವಾಗಿ ಕರೆತಂದಿದ್ದು, ಈ ವೇಳೆ ಭಯೋತ್ಪಾದಕರು ನಡೆಸಿದ ದಾಳಿಗೆ ದಿಟ್ಟ ಉತ್ತರ ನೀಡಿ, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ