ಶನಿವಾರಸಂತೆ ಗ್ರಾಮ ಪಂಚಾಯತ್ ಗೆ ಎಂಎಲ್‌ಸಿ ಸುನೀಲ್ ಸುಬ್ರಮಣಿ ಭೇಟಿ
04/05/2020

ಮಡಿಕೇರಿ ಮೇ 4 : ಕೊರೋನಾ ವೈರಸ್ ಹರಡದಂತೆ ತಡೆಯಲು ಜಿಲ್ಲೆಯಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಅಧಿಕಾರಿಗಳಂತೆ ಜನಪ್ರತಿನಿಧಿಗಳು ಕೂಡ ಗ್ರಾಮ ಗ್ರಾಮಗಳ ಮೇಲೆ ನಿಗಾ ಇರಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಶನಿವಾರಸಂತೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕೊರೋನಾ ಮುಂಜಾಗೃತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಗ್ರಾ.ಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.