‘ಸೇವಾ ಸಿಂಧು’ ವೆಬ್ ಮೂಲಕ ನೋಂದಣಿ

04/05/2020

ಮಡಿಕೇರಿ ಮೇ 4 : ಕೊಡಗು ಜಿಲ್ಲೆಯಲ್ಲಿರುವ ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ 3886 ಮಂದಿ ತಮ್ಮ ಊರಿಗೆ ತೆರಳುವುದಕ್ಕೆ ಸಂಬಂಧಿಸಿದಂತೆ ‘ಸೇವಾ ಸಿಂಧು’ ವೆಬ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಜನರನ್ನು ಕಳುಹಿಸುವ ಕಾರ್ಯದ ಉಸ್ತುವಾರಿಯನ್ನು ಉಪ ವಿಭಾಗಾಧಿಕಾರಿ ಜವರೇಗೌಡ ಅವರಿಗೆ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಹೊರ ರಾಜ್ಯಗಳಿಂದ ಕೊಡಗಿಗೆ ಬರಲು ವೆಬ್ ಮೂಲಕ ಇಲ್ಲಿಯವರೆಗೆ 368 ಮಂದಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.