ಪ್ರಥಮ ಪಿಯು ಫಲಿತಾಂಶ

May 5, 2020

ಬೆಂಗಳೂರು ಮೇ 4 : ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‍ಗೆ ಅಥವಾ ಇಮೇಲ್‍ಗೆ ಫಲಿತಾಂಶದ ವಿವರ ತಲುಪಲಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‍ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿಯೇ ನಿರ್ವಹಿಸಲುಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದ ಎಂದೂ ಕೂಡ ತಿಳಿಸಲಾಗಿತ್ತು.