2,573 ಹೊಸ ಪಾಸಿಟಿವ್ ಪ್ರಕರಣ ಪತ್ತೆ
05/05/2020

ನವದೆಹಲಿ ಮೇ 4 : ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ವಿವಿಧ ರಾಜ್ಯಗಳಿಂದ 2,573 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 42, 836ಕ್ಕೆ ಏರಿಕೆಯಾಗಿದೆ. ಈ ಪೈಕಿ 11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದ 20 ಮಹಾ ನಗರಗಳಲ್ಲಿ ಕೊರೋನಾ ವೈರಸ್‍ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಂಬೈ, ಅಹಮದಾಬದ್, ದೆಹಲಿ, ಚೆನ್ನೈ ನಗರಗಳಲ್ಲೇ ಹೆಚ್ಚು ಕೊರೋನಾ ಪೀಡಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.