ತಮ್ಮದೇ ಸರ್ಕಾರದ ವಿರುದ್ಧ ಟೀಕೆ

05/05/2020

ಮಡಿಕೇರಿ ಮೇ 4 : ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮದೇ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಲಸೆ ಕಾರ್ಮಿಕರ ರವಾನೆ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಟ್ವಿಟರ್ ನಲ್ಲಿ ಟೀಕೆ ಮಾಡಿದ್ದು, ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಉಚಿತ ವಿಮಾನ ಸೇವೆ ನೀಡುವ ಸರ್ಕಾರ ದೇಶದಲ್ಲಿರುವ ವಲಸೆ ಕಾರ್ಮಿಕರ ರವಾನೆಗೆ ಟಿಕೆಟ್ ದರ ಪಡೆಯುತ್ತಿದೆ. ಎಂತಹ ಮೂರ್ಖ ಸರ್ಕಾರ ಎಂದು ಟೀಕಿಸಿದ್ದಾರೆ.
ಅಂತೆಯೇ ಕಾರ್ಮಿಕರ ಸಂಚಾರಿ ವೆಚ್ಚವನ್ನು ರೈಲ್ವೇ ಇಲಾಖೆ ಭರಿಸದಿದ್ದರೆ, ಪಿಎಂ ಕೇರ್ಸ್ ಫಂಡ್ ಏಕೆ ಭರಿಸಬಾರದು ಎಂದು ಕೇಳಿದ್ದಾರೆ. ಇದೇ ವಿಚಾರವಾಗಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಚರ್ಚೆ ಮಾಡಿದ್ದು, ಅವರು ಕಾರ್ಮಿಕರ ಸಂಚಾರಿ ವೆಚ್ಚದ ಶೇ.85ರಷ್ಟು ಹಣವನ್ನು ಕೇಂದ್ರ ಸರ್ಕಾರ ಮತ್ತು ಶೇ.15ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಭರಿಸಲಿವೆ ಎಂದು ಭರವಸೆ ನೀಡಿದೆ ಎಂದು ಹೇಳಿದ್ದಾರೆ.