ಅಗಲಿದ ಕೆ.ಎಸ್. ನಿಸಾರ್ ಅಹ್ಮದ್ ಅವರಿಗೆ ಶ್ರದ್ಧಾಂಜಲಿ
05/05/2020

ಮಡಿಕೇರಿ ಮೇ 5 : ಭಾನುವಾರ ನಿಧನರಾದ ಹಿರಿಯ ಸಾಹಿತಿ, ನಾಡೋಜ ಕೆ.ಎಸ್. ನಿಸಾರ್ ಅಹ್ಮದ್ ಅವರ ಆತ್ಮಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆದ ಸರಳ ಶ್ರದ್ಧಾಂಜಲಿ ಸಭೆಯಲ್ಲಿ ನಿಸಾರ್ ಅಹ್ಮದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಂತಿ ಕೋರಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶಕರುಗಳಾದ ಫಿಲಿಪ್‍ವಾಸ್, ಕೆ.ಕೆ.ನಾಗರಾಜ ಶೆÉಟ್ಟಿ, ಮೂರ್ನಾಡು ಹೋಬಳಿ ಅಧ್ಯಕ್ಷ ಪಿ.ಪಿ.ಸುಕುಮಾರ್, ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಅಧಿಕಾರಿ ಶಿವಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಕಸಾಪ ಕಚೇರಿ ಸಿಬ್ಬಂದಿ ಶ್ವೇತಾ ಹಾಜರಿದ್ದರು.