ಟಿವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ

06/05/2020

ಬೆಂಗಳೂರು ಮೇ 5 : ಅತ್ಯಲ್ಪ ಪ್ರಮಾಣದ ಕಲಾವಿದರನ್ನು ತಂತ್ರಜ್ಞರನ್ನು ಬಳಸಿಕೊಂಡು ಟಿವಿ ಸೀರಿಯಲ್ ಗಳನ್ನು ಮನೆಯ ಒಳಗೆ ಚಿತ್ರೀಕರಣ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ದ ಅನುಮತಿ ನೀಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಟೆಲೆವಿಜನ್ ಅಸೋಸಿಯೇಷನ್ ಜೊತೆ ಸಭೆ ನಡೆಸಲಾಯಿತು,ಸಭೆಯಲ್ಲಿ ಕಿರುತೆರೆ ಎದುರಿಸು ತ್ತಿರುವ ಸಂಕಷ್ಟ ಕುರಿತು ಚರ್ಚೆ ನಡೆಸಲಾಯಿತು,ಆರ್ಥಿಕ ಸಂಕಷ್ಟವನ್ನು ತಡೆಯಲು ಚಿತ್ರೀಕರಣ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಲಾಯಿತು,ಮನವಿಗೆ ಸ್ಪಂಧಿಸಿದ ಸರ್ಕಾರ ಕೊರೊನಾ ಮಾರ್ಗಸೂಚಿ ಪಾಲನೆಯ ಷರತ್ತವಿಧಿಸಿ ಚಿತ್ರೀಕರಣಕ್ಕೆ ಅನುಮತಿ ನೀಡಿತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಿರುತೆರೆ ಚಿತ್ರ ನಿರ್ಮಾಣ, ಟಿವಿ ಸೀರಿಯಲ್ ಕಲಾವಿದರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿದ್ದರು ಅವರೊಂದಿಗೆ ಸಿಎಂ ಭೇಟಿ ಮಾಡಿ ಟಿವಿ ಸೀರಿಯಲ್ ಆರಂಭ ಕುರಿತು ಚರ್ಚೆ ನಡೆಸಲಾಗಿದೆ. ಮನೆಯೊಳಗೆ ಹತ್ತರಿಂದ ಹನ್ನೆರಡು ಜನ ಸೇರಿ ಚಿತ್ರೀಕರಣ ನಡೆಸಲು ಮಾತ್ರ ಅವಕಾಶ ನೀಡ ಬೇಕು ಎಂದು ತಿಳಿಸಿದರು.