ದಲಿತ ಸಂಘರ್ಷ ಸಮಿತಿಯಿಂದ ಬುದ್ಧ ಪೌರ್ಣಮಿ ಆಚರಣೆ

07/05/2020

ಮಡಿಕೇರಿ ಮೇ 7 : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯಲ್ಲಿ ಬುದ್ಧ ಪೌರ್ಣಮಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬುದ್ಧ ನಮನ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿ ಪುಷ್ಪನಮನ ಸಲ್ಲಿಸಲಾಯಿತು. ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಮತ್ತಿತರ ಪ್ರಮುಖರು ಹಾಜರಿದ್ದರು.