ಎಲ್ಲರಿಗೂ ವಿಶೇಷ ಪ್ಯಾಕೇಜ್ ನೀಡಿ ಅರ್ಚಕರನ್ನು ಕಡೆಗಣಿಸಿದರು : ಕೊಡಗು ಬ್ರಾಹ್ಮಣರ ಸಂಘ ಆರೋಪ

07/05/2020

ಮಡಿಕೇರಿ ಮೇ 7 : ವಿವಿಧ ಕ್ಷೇತ್ರಗಳ ಶ್ರಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವ ರಾಜ್ಯ ಸರ್ಕಾರ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಬಡ ಅರ್ಚಕ ವೃಂದ ಹಾಗೂ ಅಡುಗೆಯವರನ್ನು ಕಡೆಗಣಿಸಿದೆ ಎಂದು ಕೊಡಗು ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ವಾಭಿಮಾನದಿಂದ ಬದುಕುತ್ತಿರುವ ನಾವು ಬೇರೆಯವರ ಬಳಿ ನೆರವು ಕೇಳಲಾಗದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿದ್ದೇವೆ. ಪ್ರಾಚೀನ ಇತಿಹಾಸವನ್ನು ಹೊಂದಿರುವ ಪವಿತ್ರವಾದ ಹಿಂದೂ ಧರ್ಮವನ್ನು ಉಳಿಸಿ ಬೆಳೆಸುವಲ್ಲಿ ದೇವಾಲಯದ ಆರ್ಚಕರು, ಪುರೋಹಿತರ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇದನ್ನು ಮನಗಂಡು ಸರ್ಕಾರ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ. ಅರ್ಚಕರ ಸಂಕಷ್ಟಕ್ಕೆ ಸ್ಪಂದಿಸಿದ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳಿಗೆ ಅವರು ಇದೇ ಸಂದರ್ಭ ಕೃತಜ್ಞತೆ ಸಲ್ಲಿಸಿದ್ದಾರೆ.