ಪಾಂಡಂಡ ಕುಟ್ಟಪ್ಪ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ

08/05/2020

ಮಡಿಕೇರಿ ಮೇ 8 : ಕೊಡವ ಕೌಟುಂಬಿಕ ಹಾಕಿ ಹಬ್ಬದ ಜನಕ ಪಾಂಡಂಡ ಕುಟ್ಟಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
ಯುವ ಸಮೂಹಕ್ಕೆ ಸ್ಫೂರ್ತಿಯಾಗಿ ಹಾಕಿ ಕ್ರೀಡಾ ಕ್ಷೇತ್ರಕ್ಕೆ ಅಮೂಲ್ಯ ಕ್ರೀಡಾಪಟುಗಳನ್ನು ನೀಡಲು ಕಾರಣಕರ್ತರಾದ ಕುಟ್ಟಪ್ಪ ಅವರ ಅಗಲಿಕೆ ಅತೀವ ದು:ಖವನ್ನು ತಂದಿದೆ. ಕ್ರೀಡಾ ಪ್ರತಿಭೆಗಳಿಗೆ ಮತ್ತು ಕ್ರೀಡಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.