ಚೆಟ್ಟಳ್ಳಿಯಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ : ಸೂಕ್ತ ಕ್ರಮಕ್ಕೆ ತಾ. ಪಂ. ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಒತ್ತಾಯ

09/05/2020

ಮಡಿಕೇರಿ ಮೇ 9 : ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಾಲ್ಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಒತ್ತಾಯಿಸಿದ್ದಾರೆ.
ಕಾಡಾನೆಗಳ ಹಿಂಡು ತೋಟದೊಳಗೆ ನುಗ್ಗಿ ಫಸಲು ನೀಡುವ ಗಿಡ, ಮರಗಳನ್ನು ನಾಶ ಮಾಡುತ್ತಿವೆ. ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.