ಮಹಿಳೆಗೆ ನಡು ರಸ್ತೆಯಲ್ಲಿಯೇ ಹೆರಿಗೆ

09/05/2020

ಬೆಂಗಳೂರು ಮೇ 8 : ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿರುವ ಪರಿಣಾಮ ಮಹಿಳೆಗೆ ನಡು ರಸ್ತೆಯಲ್ಲಿಯೇ ಹೆರಿಗೆಯಾಗಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.
ಕಿರಣ್ (35) ಎಂಬಾಕೆ ಕತ್ರಾ ಬಜಾರ್ ನ ರಸ್ತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಮಗುವಿಗೆ ಜನ್ಮ ನೀಡಿದ್ದಾರೆ. ಇದಕ್ಕೆ ವೈದ್ಯರು ಚಿಕಿತ್ಸೆ ನೀಡದೇ ಇರುವುದೇ ಕಾರಾಣ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಈ ಘಟನೆ ವರದಿಯಾಗುತ್ತಿದ್ದಂತೆಯೇ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನರೇಂದ್ರ ಸಿಂಗ್ ಹಾಗೂ ಶಿಕೋಹಾಬಾದ್ ನ ಸರ್ಕಲ್ ಆಫೀಸರ್ ಇಂದು ಪ್ರಭ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನಿರಾಕರಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.