ಸಿಬಿಎಸ್‍ಇ ಪರೀಕ್ಷೆ ಜು.1 ರಿಂದ ಆರಂಭ

May 9, 2020

ನವದೆಹಲಿ ಮೇ 8 : ಕೋವಿಡ್-19 ಲಾಕ್‍ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಿಬಿಎಸ್‍ಇ 10 ಹಾಗೂ12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ 1 ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ.
ಬಾಕಿ ಇರುವ ಪರೀಕ್ಷೆಗಳ ವೇಳಾಪಟ್ಟಿಗಾಗಿ ವಿದ್ಯಾರ್ಥಿಗಳು ಅಸಹನೆಯಿಂದ ಕಾಯುತ್ತಿದ್ದಾರೆ. ಇದೀಗ ಜುಲೈ 1 ರಿಂದ 15ರವರೆಗೆ ಪರೀಕ್ಷೆಗಳನ್ನು ನಡೆಸಬೇಕೆಂದು ಇಂದು ನಿರ್ಧರಿಸಲಾಗಿದೆ ಎಂದು ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ.
ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್‍ಇ) ಸಂಜೆ ನಂತರ ಪರೀಕ್ಷೆಗಳ ವಿವರವಾದ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

error: Content is protected !!