ಶೈಕ್ಷಣಿಕ ವರ್ಷದ ಅವಧಿ ಬಗ್ಗೆ ನಿರ್ಧಾರ

May 9, 2020

ಬೆಂಗಳೂರು ಮೇ 8 : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶೀಘ್ರದಲ್ಲೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಹೆಚ್ಚುವರಿ ಶೈಕ್ಷಣಿಕ ಚಟುವಟಿಕೆಗಳು ಇರುವುದಿಲ್ಲ. ಸೀಮಿತ ಅವಧಿಯಲ್ಲಿ ಯಾವ ಯಾವ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಎಸ್‍ಎಸ್‍ಎಲ್ಸಿ ಪರೀಕ್ಷೆ ಮುಗಿದ ತಕ್ಷಣವೇ ಸಿಇಟಿ ಪರೀಕ್ಷೆಗಳನ್ನೂ ನಡೆಸಿ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬೋಧನಾ ಚಟುವಟಿಕೆಗಳನ್ನು ಇಲಾಖೆಯ ಯುಟ್ಯೂಬ್ ವಾಹಿನಿಗೆ ಅಪ್ಲೋಡ್ ಮಾಡಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

 

error: Content is protected !!