ಹೋರಾಟದ ಎಚ್ಚರಿಕೆ ನೀಡಿದ ಸಿದ್ದು

09/05/2020

ಬೆಂಗಳೂರು ಮೇ 8 : ಸರ್ಕಾರ ರೈತರಿಗೆ ಹೊಸದಾಗಿ ಬಡ್ಡಿ ರಹಿತ ಸಾಲ ಕೊಡಬೇಕು. ರೈತರು ಈಗಾಗಲೇ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೊರೋನಾ ಪರಿಹಾರಕ್ಕಾಗಿ ಸರ್ಕಾರಪ್ರಕಟಿಸಿರುವ ಪರಿಹಾರ ಧನ ತೃಪ್ತಿದಾಯಕವಾಗಿಲ್ಲ.ಲಕ್ಷಾಂತರ ರೂ.ಖರ್ಚು ಮಾಡಿ ಹೂ ಬೆಳೆದ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ.ಪರಿಹಾರ ಸಾಕಾಗುವುದಿಲ್ಲ. ಅಲ್ಲದೇ ನೇಕಾರರು, ಅಗಸ, ಸವಿತಾ ಆಟೋ, ಕ್ಯಾಬ್ ಚಾಲಕರನ್ನು ಮಾತ್ರ ಪರಿಹಾರದಡಿಸೇರಿಸಿ ಬಹುತೇಕ ಸಂಘಟಿತ ಅಸಂಘಟಿತ ಕಾರ್ಮಿಕರನ್ನೆಲ್ಲ ಕೈಬಿಡಲಾಗಿದೆ. ಕೈಬಿಟ್ಟಿರುವ ಎಲ್ಲಾ ಸಮುದಾಯಕ್ಕೂ ಸರ್ಕಾರ ಪರಿಹಾರ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದರು.