ಕುಶಾಲನಗರದಲ್ಲಿ ಪರಿಸರ ಕಾಳಜಿ : ಗಿಡನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ

09/05/2020

ಮಡಿಕೇರಿ ಮೇ 9 : ಕೊರೋನಾ ಲಾಕ್ ಡೌನ್ ನಡುವೆ ಕುಶಾಲನಗರದಲ್ಲಿ ಪರಿಸರ ಕಾಳಜಿ ತೋರಲಾಯಿತು. ಕುಶಾಲನಗರ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಸ್ಥಳೀಯ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಗಿಡನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚರಂಜನ್ ಅವರು ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕರು ಹಸಿರ ಪರಿಸರ ರಕ್ಷಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು. ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿಯ ಸಂಚಾಲಕ ಚಂದ್ರಮೋಹನ್ ಹಾಜರಿದ್ದರು.