ಕೊಡಗು ಜಿಲ್ಲೆಯಲ್ಲಿ ಸಾಂಸ್ಥಿಕ ಸಂಪರ್ಕ ತಡೆಗೆ ಕಾರ್ಯಾರಂಭ

09/05/2020

ಮಡಿಕೇರಿ ಮೇ 9 : ಕೋವಿಡ್-19 ರ ಸಂಬಂಧ ಜಿಲ್ಲೆಯ ಹಾಸ್ಟೆಲ್ ಗಳು ಮತ್ತು ವಸತಿ ಶಾಲೆಗಳನ್ನು ಸಾಂಸ್ಥಿಕ ಸಂಪರ್ಕತಡೆ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. 05 ಮೇ 2020 ರಿಂದ 144 ಜನರು ಹೊರ ರಾಜ್ಯಗಳಿಂದ ಜಿಲ್ಲೆಗೆ ಪ್ರವೇಶಿಸಿರುತ್ತಾರೆ. ಸರ್ಕಾರದ ಆದೇಶದಂತೆ ಹೊರ ರಾಜ್ಯಗಳಿಂದ ಬಂದ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಸಂಪರ್ಕತಡೆಯಲ್ಲಿ ಇಡಬೇಕಾಗಿರುತ್ತದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.