ಶಿವಶರಣ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
10/05/2020

ಮಡಿಕೇರಿ ಮೇ 10 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಶರಣ ಹೇಮರೆಡ್ಡಿ ಮಲ್ಲಮ್ಮ ಜಯಂತಿಯು ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಭಾನುವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶಿವಶರಣ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ, ಮಂಜುನಾಥ್ ಇತರರು ಹಾಜರಿದ್ದರು.