ಕೊಡಗಿಗೆ ಬಂದ 5147 ಮಂದಿಗೆ ಗೃಹ ಸಂಪರ್ಕ ತಡೆ

10/05/2020

ಮಡಿಕೇರಿ ಮೇ 10 : ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಲ್ಲಿದ್ದ ಕೊಡಗಿನ ಮಂದಿ ತವರು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5147 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ.
ರಾಜ್ಯದ ಇತರೆ ಜಿಲ್ಲೆಗಳ 4955 ಮತ್ತು ಇತರೆ ರಾಜ್ಯದ 192 ಮಂದಿ ಸಂಪರ್ಕ ತಡೆಯಲಿದ್ದಾರೆ. ಒಟ್ಟು 927 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, 885 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ.
ಒಟ್ಟು 41 ಮಂದಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 29 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.