ಕೇಂದ್ರದಿಂದ ಶೀಘ್ರ ಮತ್ತೊಂದು ಪ್ಯಾಕೇಜ್

11/05/2020

ನವದೆಹಲಿ ಮೇ 10 : ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.
ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಈಗಾಗಲೇ ಕೇಂದ್ರ ಸರ್ಕಾರವು 1.7 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಆರ್ಥಿಕತೆಯ ಸುಧಾರಣೆಗೆ ಸರ್ಕಾರ ಮುಂದಿನ ವಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮತ್ತೊಂದು ಪ್ಯಾಕೇಜ್ ಘೋಷಣೆ ಸಂಬಂಧ ಕಳೆದ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದು, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಪ್ರಧಾನಿ ಕಾರ್ಯಾಲಯ ಸಿದ್ಧತೆ ನಡೆಸುತ್ತಿದೆ ಎಂದೂ ಹೇಳಲಾಗಿದೆ.