ವೈದ್ಯಕೀಯ ಸಿಬ್ಬಂದಿಗಳ ಸೇವೆ ಅವಿಸ್ಮರಣೀಯ : ಕೆ.ಎಂ.ಗಣೇಶ್ ಶ್ಲಾಘನೆ

12/05/2020

ಮಡಿಕೇರಿ ಮೇ 12 : ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ಸೋಂಕು ಕೊಡಗು ಜಿಲ್ಲೆಯನ್ನು ವ್ಯಾಪಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಕೋವಿಡ್ -19 ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳ ಸೇವೆ ಅವಿಸ್ಮರಣೀಯವೆಂದು ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯ ಕೋವಿಡ್ ಆಸ್ಪತ್ರೆ ಆವರಣದಲ್ಲಿ ವೈದ್ಯರು, ಶ್ರುಶೂಷಕಿಯರು ಹಾಗೂ ಇತರ ಸಿಬ್ಬಂದಿಗಳಿಗೆ ಶಾಲು ಹೊದಿಸಿ ಪುಷ್ಪಾರ್ಚನೆಯೊಂದಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.