ಗಿರಿಜನ ಕುಟುಂಬಗಳಿಗೆ ಮೂಲಭೂತ ಸೌಲಭ್ಯ : ಕೆ.ಜಿ.ಬೋಪಯ್ಯ ಭರವಸೆ
12/05/2020

ಮಡಿಕೇರಿ ಮೇ 12 : ತಲೆತಲಾಂತರಗಳಿಂದ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಗಿರಿಜನ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ವಿವಿಧ ಹಾಡಿ ನಿವಾಸಿಗಳ 1380 ಅರ್ಜಿಗಳನ್ನು ಪರಿಶೀಲಿಸಿ ಸುಮಾರು 200 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಕ್ಕುಪತ್ರ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.