ಕೊಡಗಿನಲ್ಲಿ 6336 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ

12/05/2020

ಮಡಿಕೇರಿ ಮೇ 12 : ಕೊರೋನಾ ಮುಕ್ತ ಜಿಲ್ಲೆ, ಹಸಿರ ವಲಯದಲ್ಲಿರುವ ಕೊಡಗಿನಲ್ಲಿ ಇಂದಿನ ಅಂಕಿ ಅಂಶಗಳ ಪ್ರಕಾರ 6336 ಮಂದಿಯನ್ನು ಗೃಹ ಸಂಪರ್ಕ ತಡೆಯಲ್ಲಿಡಲಾಗಿದೆ.
ಒಂದು ಸಾವಿರ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, 909 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. 90 ಪ್ರಕರಣಗಳಲ್ಲಿ ವರದಿ ನಿರೀಕ್ಷಿಸಲಾಗುತ್ತಿದೆ.
ಪ್ರಸ್ತುತ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 61 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.