ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವೀಡಿಯೊ ಸಂವಾದ

May 13, 2020

ಮಡಿಕೇರಿ ಮೇ12 : ಕೋವಿಡ್-19 ಸಂಬಂಧ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಗ್ಗೆ ತಹಶೀಲ್ದಾರರು, ತಾಲೂಕು ಪಂಚಾಯಿತಿ ಇಒಗಳು, ತಾಲೂಕು ಆರೋಗ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವೀಡಿಯೊ ಸಂವಾದ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ವಿಡಿಯೊ ಸಂವಾದದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಪೌರಯುಕ್ತರಾದ ರಮೇಶ್, ನೋಡಲ್ ಅಧಿಕಾರಿ ರಾಜು, ತಾ.ಪಂ.ಇಒಗಳು, ತಹಶೀಲ್ದಾರರು ಇತರರು ಹಾಜರಿದ್ದರು.
ಲಾಕ್‍ಡೌನ್ ಸಡಿಲ ಹಿನ್ನೆಲೆ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಸ್ಥಳೀಯರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಸಂಬಂಧ ಅಗತ್ಯ ಕ್ವಾರಂಟೈನ್ ಮಾಡುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು.

 

 

 

error: Content is protected !!