ಮಾಜಿ ಪ್ರಧಾನಿ ಡಾ.ಸಿಂಗ್ ಡಿಸ್ಚಾರ್ಜ್

13/05/2020

ನವದೆಹಲಿ ಮೇ 12 : ಮಾಜಿ ಪ್ರಧಾನಿ ಡಾ. ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾನುವಾರ ಸಂಜೆ ಎದೆನೋವು ಕಾಣಿಸಿಕೊಂಡಿದ್ದ ಕಾರಣ ಸಿಂಗ್ ರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವಿಶೇಷ ವಾರ್ಡಿನಲ್ಲಿ ಚಿಕಿತ್ಸೆ ನೀಡಿದ ಬಳಿಕ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಪ್ರಕಟಣೆ ನೀಡಿದ್ದರು.
ಸಿಂಗ್ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಅವರ ಚಿಕಿತ್ಸೆ ಮೇಲ್ವಿಚಾರಣೆ ವಹಿಸಿತ್ತು.