ಕನ್ನಡಿಗರ ನೆರವಿಗೆ ಬಂದ ನಟ ಸೋನು
13/05/2020

ಮುಂಬೈ ಮೇ 12 : ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿ ಊಟ, ವಸತಿ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದ ಸುಮಾರು 350 ಬಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ವೆಚ್ಚದಲ್ಲಿ ಬಸ್ ಗಳ ಮೂಲಕ ಕರ್ನಾಟಕಕ್ಕೆ ಕಳುಹಿಸಿದ್ದಾರೆ.
ಸೋನು ಸೂದ್ ಅವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗುತ್ತಿದೆ. ಹಲವು ಮಂದಿ ಅಭಿಮಾನಿಗಳು, ಸ್ನೇಹಿತರು, ಸೋನು ಸೂದ್ ಅವರ ಸಮಾಜ ಸೇವೆ ಕಾರ್ಯದ ಪೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿನಂದಿಸುತ್ತಿದ್ದಾರೆ.