2 ದಿನ ಭಾರೀ ಮಳೆ ಸಾಧ್ಯತೆ

13/05/2020

ನವದೆಹಲಿ ಮೇ 12 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಕರಾವಳಿ ಭಾಗಗಳಲ್ಲಿ ಇದೆ 15 ಮತ್ತು 16 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗಂಟೆಗೆ 100 ಕಿ.ಮೀ. ಗೂ ಹೆಚ್ಚು ವೇಗದಲ್ಲಿ ಬೀಸುವ ಗಾಳಿಯು ದಕ್ಷಿಣದ ರಾಜ್ಯಗಳ ಕರಾವಳಿ ಪ್ರದೇಶವನ್ನು ಅಪ್ಪಳಿಸಲಿದೆ ಎಂದೂ ಇಲಾಖೆ ಹೇಳಿದೆ.